ಬೆಂಗಳೂರಿನಲ್ಲಿ ಭಾರೀ ಮಳೆ : ರಸ್ತೆಯಲ್ಲಿ ವಾಹನ ಸವಾರರ ಪರದಾಟ

ಬುಧವಾರ, 21 ಜೂನ್ 2023 (06:30 IST)
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಮಳೆರಾಯನ ಆಗಮನವಾಗಿದ್ದು, ನಗರದ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ವಾಹನ ಸವಾರರು ಸಂಚರಿಸಲು ರಸ್ತೆ ಕಾಣಿಸದೆ ಪರದಾಡಿದ್ದಾರೆ.

ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಮುಂದಿನ 3 ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಅದೇ ರೀತಿ ಬೆಂಗಳೂರಿನಲ್ಲಿ ಮಳೆ ಪ್ರಾರಂಭವಾಗಿದ್ದು, ಹಲವೆಡೆ ಭಾರೀ ಪ್ರಮಾಣದ ಮಳೆಯಾಗಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ನಗರದ ಮೌರ್ಯ ಸರ್ಕಲ್, ಕೆಆರ್ ಸರ್ಕಲ್, ಶಿವಾನಂದ ಸರ್ಕಲ್, ರೇಸ್ ಕೋರ್ಸ್, ಮೆಜೆಸ್ಟಿಕ್, ಫ್ರೀಡಂ ಪಾರ್ಕ್, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ