ಸೆ.5ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬುಧವಾರ, 1 ಸೆಪ್ಟಂಬರ್ 2021 (08:01 IST)
ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಹೆಚ್ಚಾಗಲಿದೆ.

Karnataka Rains Today:(ಸೆ.01): ಕರ್ನಾಟಕದಲ್ಲಿ ಮುಂಗಾರು ಮಳೆಯ  ಅಬ್ಬರ ಹೆಚ್ಚಾಗಿದ್ದು, ಸೆಪ್ಟೆಂಬರ್ 5ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ. ಸೆಪ್ಟೆಂಬರ್ 5ರವರೆಗೆ ರಾಜ್ಯ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮತ್ತು ಕೋಲಾರ ಜಿಲ್ಲೆಗಳಲ್ಲಿ ಸೆ.5ರವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಇನ್ನು, ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಹೆಚ್ಚಾಗಲಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ತುಮಕೂರು ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ