ರಾಜ್ಯಾದ್ಯಂತ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್
ಮುಷ್ಕರ ಕಾನೂನು ಬಾಹಿರ ಎಂದು ಎಚ್ ಎಂ.ವೆಂಕಟೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಗೆ ನೋಟಿಸ್ ನೀಡಿ ಮುಷ್ಕರ ತಡೆಗೆ ಆದೇಶಿಸಿದೆ.
ಮಾ.20 ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ.