ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ.
ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದಾರೆ. ಆದರೆ ಈ ವಿವಾದದ ಬಗ್ಗೆ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
ನಿನ್ನೆ ವಾದ ಪ್ರತಿವಾದದ ಬಳಿಕ ಕೋರ್ಟ್ ಇಂದಿಗೆ ವಿಚಾರಣೆ ಮುಂದೂಡಿದೆ. ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಅಂತ ಇಡೀ ರಾಜ್ಯ ಕಾದು ಕುಳಿತಿದೆ. ಹಿಜಾಬ್ ವಿವಾದ ಹಿನ್ನೆಲೆ ಬಂದ್ ಆಗಿದ್ದ ಕಾಲೇಜುಗಳು ಇಂದಿನಿಂದ ಆರಂಭವಾಗಲಿದೆ. ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.