ಬೆಂಗಳೂರು : ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದಕ್ಕೆ ನಿಷೇಧ ವಿಧಿಸಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.
ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ನ್ಯಾಯಪೀಠ, ವಿಚಾರಣೆ ಇತ್ಯರ್ಥ ಆಗುವವರೆಗೆ ವಿದ್ಯಾರ್ಥಿಗಳು ತರಗತಿಗಳಿಗೆ ಕೇಸರಿ ಶಾಲು, ಹಿಜಬ್ ಧರಿಸಿ ಪ್ರವೇಶಿಸುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ವಿವಾದ ನಿನ್ನೆ ಮೊನ್ನೆಯದಲ್ಲ. ಬಹುಸಂಸ್ಕೃತಿ, ಧರ್ಮಗಳ ನೆಲೆವೀಡಾದ ಭಾರತದ ವಿವಿಧ ರಾಜ್ಯಗಳಲ್ಲೂ ಈ ಹಿಂದೆಯೂ ಹಿಜಬ್ ವಿವಾದ ಸೃಷ್ಟಿಯಾಗಿತ್ತು. ಆಯಾ ರಾಜ್ಯಗಳ ಹೈಕೋರ್ಟ್ಗಳು ತೀರ್ಪುಗಳನ್ನೂ ಪ್ರಕಟಿಸಿ ವಿವಾದಕ್ಕೆ ತೆರೆ ಎಳೆದಿವೆ.