ಹಿಜಬ್ ವಿವಾದ : ಹೈಕೋರ್ಟ್ ಪೀಠದಲ್ಲಿ ವಾದ-ಪ್ರತಿವಾದ ಹೇಗಿತ್ತು..?
ಮಂಗಳವಾರ, 15 ಮಾರ್ಚ್ 2022 (09:46 IST)
ಬೆಂಗಳೂರು : ರಾಜ್ಯದಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಬ್ ವಿವಾದದ ತೀರ್ಪು ಇಂದು ಪ್ರಕಟವಾಗಲಿದೆ.
ಹಿಜಬ್ ಧಾರ್ಮಿಕ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರುವ ವಿದ್ಯಾರ್ಥಿಗಳು ಮತ್ತು ಇಡೀ ದೇಶ ಹೈಕೋರ್ಟ್ ತೀರ್ಪಿನ ಮೇಲೆ ಕಣ್ಣಿಟ್ಟಿದೆ.
ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ಬೇಡಿಕೆ ಶುರುವಾಗಿತ್ತು.
ಮನವಿ ಪತ್ರಗಳಿಗೆ ಪುರಸ್ಕಾರ ನೀಡದ ಪ್ರಾಂಶುಪಾಲರು, ಹಿಜಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿದ್ದರು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಸರ್ಕಾರಿ ಪರ ವಕೀಲ ಪ್ರಭುಲಿಂಗ ನಾವಡಗಿ ಅವರು, ವಿದ್ಯಾರ್ಥಿನಿಯರು, ಹಿಜಬ್ ಧರಿಸುವುದು ಧಾರ್ಮಿಕ ಆಚರಣೆಯಾಗಿದೆ ಎಂಬುದನ್ನು ಸಾಬೀತುಪಡಿಸಿಲ್ಲ. ಸಮವಸ್ತ್ರ ಸಂಹಿತೆಯ ಸರ್ಕಾರದ ವಾದಕ್ಕೆ ಹೆಚ್ಚಿನ ತೂಕವಿದೆ.
ವಿಷಯವು ಧರ್ಮದ ಮೂಲ ಅಂಶದ ಭಾಗವಾಗಿದ್ದರೆ ಮಾತ್ರ ಆಚರಣೆ ಕಡ್ಡಾಯವಾಗುತ್ತದೆ. ಈ ಪ್ರಕರಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ವಾದ ಮಂಡಿಸಲಾಗ್ತಿದೆ ಎಂದು ಪ್ರತಿವಾದ ಮಾಡಿದ್ದರು.