ಹಿಜಬ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್?

ಶನಿವಾರ, 26 ಫೆಬ್ರವರಿ 2022 (07:33 IST)
ಬೆಂಗಳೂರು : ಹಿಜಬ್ ವಿವಾದಕ್ಕೆ ಸಂಬಂಧಿಸಿ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಪೂರ್ಣಪೀಠ ತೀರ್ಪನ್ನು ಕಾಯ್ದಿರಿಸಿದೆ.

11ನೇ ದಿನ ಮುಖ್ಯ ನ್ಯಾ.ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಫೆ.10 ರಂದು ಅರ್ಜಿ ವಿಚಾರಣೆ ಪ್ರಾರಂಭಿಸಿ ಇದೀಗ ಎರಡು ವಾರಗಳ ಕಾಲ ಸತತ ವಿಚಾರಣೆ ನಡೆಸಿದೆ. 

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಶ್ಯಕ ಧಾರ್ಮಿಕ ಆಚರಣೆಯ ಭಾಗವೆಂದು ಹಿಜಬ್ ಪರ ವಕೀಲರು ವಾದ ಮಂಡಿಸಿದರು. ಇಂದು ವಿಚಾರಣೆ ಮುಂದುವರಿಸಿದ ನ್ಯಾಯಾಲಯ, ಅರ್ಜಿದಾರರ ಪರ ಹಿರಿಯ ವಕೀಲರಾದ ರವಿವರ್ಮ ಕುಮಾರ್, ಯೂಸುಫ್ ಮುಚ್ಚಲ ಮತ್ತು ವಕೀಲ ಮೊಹಮ್ಮದ್ ತಾಹಿರ್ ಅವರ ನಿರಾಕರಣಾ ವಾದಗಳನ್ನು ಆಲಿಸಿತು.

ಜೊತೆಗೆ ಹಿಜಬ್ ಬೆಂಬಲಿಸಿದ ಡಾ. ವಿನೋದ್ ಕುಲಕರ್ಣಿ ಅವರ ವಾದವನ್ನು ಕೂಡ ಆಲಿಸಿತು. ಬಳಿಕ ಮಧ್ಯಂತರ ಆದೇಶ ನೀಡಬೇಕೆಂದು ಹಿಜಬ್ ಪರ ವಕೀಲರು ಮನವಿ ಮಾಡಿಕೊಂಡರು. ನಾವು ಒಂದು ತುಂಡು ಬಟ್ಟೆಗಾಗಿ ಮನವಿ ಮಾಡುತ್ತಿದ್ದೇವೆ ಈ ಕೋರ್ಟ್ ಸೂಕ್ತ ತೀರ್ಮಾನ ನೀಡಬೇಕಾಗಿ ಕೇಳಿಕೊಂಡರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ