ನಾಳೆ ಹಿಜಬ್ ಹೈಕೋರ್ಟ್ ತೀರ್ಪು

ಸೋಮವಾರ, 14 ಮಾರ್ಚ್ 2022 (14:12 IST)
ಬೆಂಗಳೂರು : ದೇಶದ್ಯಾಂತ ಸಂಚಲನ ಸೃಷ್ಟಿಸಿದ್ದ ಹಿಜಬ್ ವಿವಾದದ ಕುರಿತಾದ  ತೀರ್ಪು ಮಂಗಳವಾರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.

ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ  11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ತೀರ್ಪು ಕಾಯ್ದಿರಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ