ಹಿಜಬ್ : 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

ಭಾನುವಾರ, 25 ಸೆಪ್ಟಂಬರ್ 2022 (07:54 IST)
ಟೆಹರಾನ್ : ಹಿಜಬ್ ಧರಿಸಿಲ್ಲ ಎಂದು ಬಂಧನಕ್ಕೊಳಗಾಗಿದ್ದ ಇರಾನಿ ಯುವತಿ ಬಲಿಯಾದ ಪ್ರಕರಣ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ.

ಕಳೆದ ಒಂದು ವಾರದಿಂದಲೂ ಹಿಂಸಾತ್ಮಕ ಪ್ರತಿಭಟನೆ  ನಡೆಯುತ್ತಿದ್ದು, 700ಕ್ಕೂ ಹೆಚ್ಚು ಮದಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 739 ಮಂದಿಯನ್ನು ಬಂಧಿಸಿದ್ದು, ಅವರಲ್ಲಿ 60 ಮಂದಿ ಮಹಿಳೆಯರೂ ಇದ್ದಾರೆ ಎಂದು ಇರಾನ್ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಈಗಾಗಲೇ ಪ್ರತಿಭಟನೆ ಹತ್ತಿಕ್ಕಲು ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ವಾಟ್ಸಪ್, ಇನ್ಸ್ಟಾಗ್ರಾಮ್ ಬಳಕೆಯನ್ನೂ ನಿಷೇಧಿಸಲಾಗಿದೆ.

ಸತತ 9ನೇ ದಿನ ಇರಾನ್ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರಾರು ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ