ಹಿಜಾಬ್ ನಿಷೇಧ ಕಾನೂನುಬದ್ಧ!

ಮಂಗಳವಾರ, 15 ಮಾರ್ಚ್ 2022 (10:33 IST)
ಬೆಂಗಳೂರು : ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

ಕಳೆದ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಸರ್ಕಾರದ ಪರ ನಡೆದ ಸುದೀರ್ಘ ವಾದಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ವಿಸ್ತೃತ ಪೀಠ, ತೀರ್ಪು ಪ್ರಕಟಿಸಿದೆ.

ಹಿಜಾಬ್ ಧರಿಸಿವುದು ಮುಸ್ಲಿಂ ಮಹಿಳೆಯರ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಕುರಿತು ಸರ್ಕಾರ ನೀಡಿದ ಆದೇಶ ಕಾನೂನುಬದ್ಧವಾಗಿದೆ.

ಫೆಬ್ರವರಿ 5ರಂದು ಸರ್ಕಾರ ನೀಡಿದ ಆದೇಶವನ್ನು ಅಮಾನ್ಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಅಗತ್ಯ ಎಂಬ ಮುಸ್ಲಿಂ ವಿದ್ಯಾರ್ಥಿನಿಯರ ವಾದವನ್ನು ರಿತು ರಾಜ್ ಅವಸ್ಥಿ ನೇತೃತ್ವದ ಹೈಕೋರ್ಟ್ ಪೂರ್ಣಪೀಠ ತೀರ್ಪಿನಲ್ಲಿ ಹೇಳಿದೆ.

 
ಸಮವಸ್ತ್ರಗಳನ್ನು ಕಡ್ಡಾಯಗೊಳಿಸುವ ಸರ್ಕಾರದ ಆದೇಶದಿಂದ ಮೂಲಭೂತ ಹಕ್ಕುಗಳ ಸಾಂವಿಧಾನಿಕ ಉಲ್ಲಂಘನೆ ಆಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹಿಜಾಬ್ ಧಾರಣೆಯು ಮುಸ್ಲಿಂ ಧರ್ಮದ ಪ್ರಕಾರ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗ ಎಂಬ ಎಲ್ಲ ಅರ್ಜಿಗಳನ್ನೂ ಅದು ವಜಾಗೊಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ