ಭಾರೀ ಹಿಮಪಾತದಲ್ಲಿ ಹಿಮಾಚಲ ಪ್ರದೇಶ!

ಗುರುವಾರ, 3 ಫೆಬ್ರವರಿ 2022 (16:51 IST)
ಶಿಮ್ಲಾ : ಮುಂದಿನ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದ್ದು,

ಭಾರತೀಯ ಹವಾಮಾನ ಇಲಾಖೆ ಜನಪ್ರಿಯ ಪ್ರವಾಸಿ ತಾಣಗಳಾದ ಚಂಬಾ, ಸ್ಪಿತಿ, ಕುಲು, ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.

ಕಳೆದ ವರ್ಷಕ್ಕೆ ಹೊಲೀಸಿ ನೋಡಿದರೆ ಈ ವರ್ಷ ರಾಜ್ಯದಲ್ಲಿ ಅತೀಯಾದ ಹಿಮಪಾತವಾಗಿದೆ. ಇನ್ನೂ ಮುಂಬರುವ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ನಗರದ ಐಎಮ್ಡಿ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಸುರೇಂದರ್ ಪಾಲ್ ಅವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ದೇಶದ ಬಹುತೇಕ ಭಾಗಗಳಲ್ಲಿ ಫೆಬ್ರವರಿಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಿರುತ್ತದೆ. ಆದರೆ ಪಂಜಾಬ್ ಮತ್ತು ಹರಿಯಾಣದಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಭಾರತದ ಪರ್ಯಾಯ ದ್ವೀಪದ ಪೂರ್ವ ಮತ್ತು ನೈಋತ್ಯ ಕರಾವಳಿ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ತಿಳಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ