ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ 2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ಮತ್ತೊಮ್ಮೆ ನಿಗದಿಪಡಿಸಲಾಗಿದ್ದು,
ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.
ವಿಶೇಷವೆಂದರೆ ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ.