ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಎಷ್ಟು?

ಭಾನುವಾರ, 20 ಫೆಬ್ರವರಿ 2022 (09:39 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನ ಇಳಿಕೆಯಾಗುತ್ತಿದ್ದು, 1,137 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಸೋಂಕಿನಿಂದ 20 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 3,870 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ಒಟ್ಟು 38,82,340 ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 13,431 ಜನರಿಗೆ ಕೊರೊನಾ ಪಾಸಿಟಿವ್ ಇದೆ. ಇದುವರೆಗೂ ರಾಜ್ಯದಲ್ಲಿ 39,777 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ರೇಟ್ ಪ್ರಮಾಣ 1.43%ಗೆ ಇಳಿದಿದೆ. 1.75% ಸೋಂಕಿನಿಂದ ಜನರು ಮೃತಪಟ್ಟಿದ್ದಾರೆ. 

ಬೆಂಗಳೂರಿನಲ್ಲಿಯೂ ಸೋಂಕಿನ ಸಂಖ್ಯೆ ಕಡಿಮೆಯಾಗಿದ್ದು, 646 ಪಾಸಿಟಿವ್ ರೇಟ್ ಕಾಣಿಸಿಕೊಂಡಿದೆ. ಒಟ್ಟು 8 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ