ಕೋವಿಡ್‍ನಿಂದಾಗಿ ಕೇರಳದಲ್ಲಿ ಮೃತಪಟ್ಟ ಗರ್ಭಿಣಿಯ ಸಂಖ್ಯೆ ಎಷ್ಟು?!

ಗುರುವಾರ, 28 ಅಕ್ಟೋಬರ್ 2021 (11:29 IST)
ಕೇರಳ : ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಕೇರಳದಲ್ಲಿ 41 ಮಂದಿ ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ.
ಈ ಬಗ್ಗೆ ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, ಮಾರ್ಚ್ 2020 ರಿಂದ ಕೇರಳದಲ್ಲಿ ಇದುವರೆಗೆ 41 ಗರ್ಭಿಣಿಯರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದರ ಜೊತೆಗೆ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಸಂಖ್ಯೆ 149 ರಷ್ಟಿದೆ ಅಂತ ಕೇರಳ ರಾಜ್ಯ ಆರೋಗ್ಯ ಇಲಾಖೆಯು ಇತ್ತೀಚೆಗೆ ನಡೆಸಿದ ಸಿರೊ ಪ್ರೆವೆಲೆನ್ಸ್ ವೈಜ್ಞಾನಿಕ ಅಧ್ಯಯನದ ಸಂಶೋಧನೆಗಳು ಮಾಹಿತಿ ನೀಡಿವೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ