ರಾಜ್ಯದ ಎಷ್ಟು ಹಳ್ಳಿಗಳಲ್ಲಿ "ಗ್ರಾಮ ಒನ್’

ಗುರುವಾರ, 27 ಜನವರಿ 2022 (13:20 IST)
ಬೆಂಗಳೂರು : ಸರ್ಕಾರದ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರಿಗೆ ತಲುಪಿಸುವ ಉದ್ದೇಶ ಹೊಂದಿರುವ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ರಾಜ್ಯದ 12 ಜಿಲ್ಲೆಗಳಲ್ಲಿ ಆರಂಭವಾಗಿದೆ.
 
ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ರಾಜ್ಯದ 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ‘ಗ್ರಾಮ ಒನ್’ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈ ಯೋಜನೆಯನ್ನು ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರದ ಸೌಲಭ್ಯ ಪಡೆಯಲು ಜನರು ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆಗಳನ್ನು ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್ ಕಾರ್ಯಕ್ರಮವನ್ನು ರೂಪಿಸಲಾಗಿದೆ.

 
ಗ್ರಾಮಸ್ಥರು ನೇರವಾಗಿ ಗ್ರಾಮ ಪಂಚಾಯತಿಗಳಿಗೆ  ತೆರಳಿ ಗ್ರಾಮ ಒನ್ ಸೇವೆಗಳನ್ನು ಪಡೆಯಬಹುದಾಗಿದೆ. ಈ ಹಿಂದೆ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಅನುಷ್ಠಾನದಲ್ಲಿನ ಎಲ್ಲ ತೊಡಕುಗಳನ್ನು ನಿವಾರಿಸಲಾಗಿದೆ.

ಎಲ್ಲೆಲ್ಲಿ ಜಾರಿ?
ಬೀದರ್, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ.

ಏನೇನು ಸೇವೆ?
ಪಿಂಚಣಿ, ಪಹಣಿ, ಆರೋಗ್ಯ ಕಾರ್ಡ್ ಸೇರಿ ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸೇವೆಗಳು. ಆಧಾರ್ ಕಾರ್ಡ್, ರೇಷನ್ ಕಾರ್ಡ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ