ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

ಶನಿವಾರ, 4 ಜೂನ್ 2022 (14:01 IST)
ಇಪಿಎಫ್ಒ ಪೋರ್ಟಲ್ನಲ್ಲೇ ನಿಮ್ಮ ಸಕ್ರಿಯ ಯುನಿವರ್ಸಲ್ ಅಕೌಂಟ್ ನಂಬರ್  ಬಳಸಿ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಬಹುದು.

ಅಷ್ಟೇ ಅಲ್ಲ, ಇ-ಪಾಸ್ ಬುಕ್ ಡೌನ್ ಲೋಡ್ ಮಾಡಬಹುದು ಹಾಗೂ ಪ್ರಿಂಟ್ ಕೂಡ ತೆಗೆಯಬಹುದು. ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲಿಗೆ ನೀವು www.epfindia.gov.in ಭೇಟಿ ನೀಡಿ. ‘Our Services’ಅಡಿಯಲ್ಲಿ ‘ಈoಡಿ ‘For Employees’ಆಯ್ಕೆ ಮೇಲೆ ಕ್ಲಿಕ್ ಮಾಡಿ.

‘Services’ಆಯ್ಕೆ ಅಡಿಯಲ್ಲಿ ‘Member Passbook’ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನೀವು ನಿಮ್ಮ ಯುಎಎನ್ ಸಂಖ್ಯೆ ಹಾಗೂ ಪಾಸ್ ವರ್ಡ್ ನಮೂದಿಸಿದರೆ ನಿಮ್ಮ ಪಾಸ್ ಬುಕ್ ಕಾಣಿಸುತ್ತದೆ.

ಆದ್ರೆ ಹೀಗೆ ನಿಮ್ಮ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ನಿಮ್ಮ ಯುಎಎನ್ ಸಂಖ್ಯೆ ಸಕ್ರಿಯವಾಗಿರಬೇಕು. ನಿಮ್ಮ ಕಂಪನಿ ಯುಎಎನ್ ಸಂಖ್ಯೆ ಸಕ್ರಿಯಗೊಳಿಸಿದ್ರೆ ಮಾತ್ರ ನಿಮಗೆ ಬ್ಯಾಲನ್ಸ್ ಚೆಕ್ ಮಾಡಲು ಸಾಧ್ಯವಾಗುತ್ತದೆ.

-ಒಂದು ವೇಳೆ ನಿಮಗೆ ಯುಎಎನ್ ಸಂಖ್ಯೆ ಗೊತ್ತಿಲ್ಲದಿದ್ರೆ ಆಗ epfoservices.in/epfo/  ಮೇಲೆ ಕ್ಲಿಕ್ ಮಾಡಿ ಹಾಗೂ ನಿಮ್ಮ ಆಫೀಸ್ ಲಿಂಕ್ ಕ್ಲಿಕ್ ಮಾಡುವ ಮುನ್ನ ನಿಮ್ಮ ರಾಜ್ಯ ಆಯ್ಕೆ ಮಾಡಿ.

-ನಿಮ್ಮ ಪಿಎಫ್ ಖಾತೆ ಸಂಖ್ಯೆ, ಹೆಸರು ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ ಹಾಗೂ ‘Submit’ಆಯ್ಕೆ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಪಿಎಫ್ ಬ್ಯಾಲೆನ್ಸ್ ಕಾಣಿಸುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ