ದ್ವೀಪಕ್ಕೆ ಅಪ್ಪಳಿಸಲಿದೆ ಚಂಡಮಾರುತ!

ಸೋಮವಾರ, 21 ಮಾರ್ಚ್ 2022 (08:23 IST)
ನವದೆಹಲಿ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ.

ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ನೌಕಾಯಾನ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್ 21ರಂದು ಚಂಡಮಾರುತ ದ್ವೀಪಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತುರ್ತು ಹಾಗೂ ರಕ್ಷಣಾ ಕಾರ್ಯಗಳ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ರಕ್ಷಣಾ ಕಾರ್ಯಕ್ಕಾಗಿ ಸೇನೆ, ವಾಯುಪಡೆ ಹಾಗೂ ನೌಕಾಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಎನ್ಡಿಆರ್ಎಫ್ನ ಒಂದು ತುಕಡಿ ಈಗಾಗಲೇ ಪೋರ್ಟ್ಬ್ಲೇರ್ನಲ್ಲಿ ಠಿಕಾಣಿ ಹೂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ವರ್ಷದ ಮೊದಲ ಚಂಡಮಾರುತ `ಅಸಾನಿ’ ಮಾರ್ಚ್ 21 ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಆರಂಭವಾಗುವ ಸಾಧ್ಯತೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಭಾರತದ ಕರಾವಳಿಯನ್ನು ದಾಟುವ ಸಾಧ್ಯತೆಯಿಲ್ಲದಿದ್ದರೂ, ಭಾರೀ ಮಳೆ ಮತ್ತು ಬಲವಾದ ಗಾಳಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಅಂಡಮಾನ್ಗೆ ಅಪ್ಪಳಿಸಿ ನಂತರ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಕಡೆಗೆ ಚಲಿಸಲಿದೆ ಎಂದು ಮುನ್ಸೂಚನೆ ನಿಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ