ಕುಮಾರಸ್ವಾಮಿ ಎದುರಿಸಲು ನಾನು ಸಿದ್ದ: ಯೋಗೇಶ್ವರ್

ಶುಕ್ರವಾರ, 6 ಏಪ್ರಿಲ್ 2018 (18:25 IST)
ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯನ್ನು ಎದುರಿಸಲು ನಾನು ಸಿದ್ದ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಘೋಷಿಸಿದ್ದಾರೆ. 
ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಸ್ಪರ್ಧಿಸುವ ವಿಚಾರ ಕುರಿತಂತೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಹೆಚ್ ಡಿ ಕೆ ಸ್ಪರ್ಧೆಯನ್ನು ಕ್ರೀಡಾ ಮನೋಭಾವದಿಂದ ಸ್ವಾಗತಿಸುತ್ತೇನೆ. ಎರಡು ಕಡೆ ಸ್ಪರ್ಧೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಲ್ ಸಲ್ಲಿಕೆಯಾಗಿದೆ  ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲಿ ಎಂದು ತಿಳಿಸಿದ್ದಾರೆ. 
 
ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಜನರಿಗೆ ಹೊರೆ ಬೇಡ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಬದಲು ನನ್ನ ವಿರುದ್ಧ ಸ್ಪರ್ಧಿಸಲಿ. ಕುಮಾರಸ್ವಾಮಿಯವರನ್ನು ಎದುರಿಸಲು ನಾನು ಸಿದ್ದವಾಗಿದ್ದೇನೆ.
 
ಹೆಚ್ ಡಿ ಕೆ ಎದುರಿಸಲು ನಾನು ಸಿದ್ದ. ಭಾವನಾತ್ಮಕ ರಾಜಕೀಯ, ಜಾತಿ ಹೆಸರಲ್ಲಿ ಮತದಾರರನ್ನು ಸೆಳೆಯುತ್ತಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಗೆದ್ದರೆ ಅತಿಥಿ ಉಪನ್ಯಾಸಕನಂತೆ ರಾಮನಗರ ಬರುತ್ತಾರೆ. ಕಳೆದ ಹತ್ತು ವರ್ಷದಿಂದ ಕ್ಷೇತ್ರ ಗುಲಾಮಗಿರಿಯಲ್ಲಿದೆ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ