ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಲಖನ್ ಜಾರಕಿಹೊಳಿ ಬಿಜೆಪಿ ಸೇರುವ ವಿಚಾರದಿಂದ ಹಿಂದೆ ಸರಿದಿದ್ದು, ಬಿಜೆಪಿ ನನಗೆ ಮುಖ್ಯಮಂತ್ರಿ ಮಾಡಿದರೂ ಆ ಪಕ್ಷ ಸೇರುವುದಿಲ್ಲ. ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಸಿಲುಕದೆ ಬರುವ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲಿಸಿ ಕನಿಷ್ಠ 55 ಸಾವಿರಕ್ಕೂ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.