ಎಚ್ಚರ : ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ!

ಸೋಮವಾರ, 21 ನವೆಂಬರ್ 2022 (11:54 IST)
ನವದೆಹಲಿ : ಭಾರತದ ಪ್ರಮುಖ ನಗರಗಳಿಗೆ 5ಜಿ ಕಾಲಿಟ್ಟಿದ್ದು, ಡಿಜಿಟಲ್ ಯುಗದಲ್ಲಿ ಹೊಸ ಕ್ರಾಂತಿ ಶುರುವಾಗಿದೆ.

ಆದರೆ ತಾಂತ್ರಿಕತೆಯಲ್ಲಿ ಬದಲಾವಣೆ ಕಂಡುಬಂದಂತೆ ಸೈಬರ್ ಅಪರಾಧಗಳು ಹಾಗೂ ದತ್ತಾಂಶ ಕಳವಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದಕ್ಕಾಗಿ ಸಂರಕ್ಷಣಾ ಕ್ರಮಗಳನ್ನು ಒಳಗೊಂಡ ಹೊಸ ಕರಡನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರ ಟೆಲಿಕಾಂ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಂದು ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ -2022ರ ಕರಡನ್ನು  ಬಿಡುಗಡೆಗೊಳಿಸಿದ್ದಾರೆ. ಡಿಸೆಂಬರ್ 17ರ ವರೆಗೆ ಸಾರ್ವಜನಿಕರು ಮಸೂದೆಯ ಅಂಶಗಳ ಬಗ್ಗೆ ಪ್ರತಿಕ್ರಿಯೆ ನೀಡಬಹುದಾಗಿದೆ.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ