ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ : ಸಿಎಂ

ಗುರುವಾರ, 22 ಜೂನ್ 2023 (12:41 IST)
ನವದೆಹಲಿ : ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣದಿಂದ ಅಕ್ಕಿ ಹೊಂದಿಸಿಕೊಳ್ಳುತ್ತಿರುವುದು ಸ್ವಲ್ಪ ವಿಳಂಬವಾಗುತ್ತಿದೆ. ಇದರಿಂದಾಗಿ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೊಂದಿಸಲು ಬೇರೆ ಬೇರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಯಾವ ರಾಜ್ಯಗಳಲ್ಲೂ ಬೇಡಿಕೆ ಇರುವಷ್ಟು ಸಾಮರ್ಥ್ಯದಲ್ಲಿ ಪೂರೈಕೆಯಾಗದ ಹಿನ್ನೆಲೆ ಯೋಜನೆ ಜಾರಿ ಮಾಡುವುದು ಕಷ್ಟವಾಗುತ್ತಿದೆ ಎಂದರು.

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಟ್ಟ ರಾಜಕೀಯ ಮಾಡುತ್ತಿದೆ. ಈಗಾಗಲೇ ತೆಲಂಗಾಣ, ಪಂಜಾಬ್ ಸೇರಿದಂತೆ ಎಲ್ಲಾ ಕಡೆ ಕೇಳಿದ್ದೇವೆ. ಆಂಧ್ರಪ್ರದೇಶದಿಂದ ಅಕ್ಕಿ ಆಮದು ಮಾಡಿಕೊಂಡರೆ ಪ್ರತಿ ಕೆಜಿಗೆ 42 ರೂ. ಆಗಲಿದೆ. 1 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ ಆದರೆ ಅದು ಕೇವಲ ಒಂದು ತಿಂಗಳು ನೀಡಲು ಸಾಧ್ಯ ಎಂದು ಛತ್ತೀಸ್ಗಢ ಸರ್ಕಾರ ಹೇಳಿದೆ. ತೆಲಂಗಾಣ ಕೇವಲ ಗೋಧಿ ಮಾತ್ರ ಕೊಡೋಕೆ ಸಾಧ್ಯ ಅಂತ ಹೇಳಿದೆ ಎಂದು ತಿಳಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ