ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆ, ಮಧ್ಯಪ್ರದೇಶದ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಮಾತನಾಡಿದ್ದಾರೆ.
ಸರ್ಕಾರ ಜನರಿಗೆ ಎಲ್ಲವನ್ನೂ ಉಚಿತವಾಗಿ ನೀಡಲು ಸಾಧ್ಯವಿಲ್ಲ. ನಮ್ಮ ಆದಾಯ ಹೆಚ್ಚಾಗುತ್ತಿದ್ದರೆ ನಾವು ಹಣದುಬ್ಬರವನ್ನು ಸ್ವೀಕರಿಸಬೇಕಾಗುತ್ತದೆ ಎಂಬುದನ್ನು ಸಾರ್ವಜನಿಕರು ಅರ್ಥಮಾಡಿಕೊಳ್ಳಬೇಕು. ತೆರಿಗೆ ಸಂಗ್ರಹದಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಇಂಧನದಿಂದ ಬಂದ ಆದಾಯವನ್ನ ಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡಲಾಗುತ್ತದೆ ಅಂತ ಮಹೇಂದ್ರ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಸದ್ಯ, ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ ಸಾಕಷ್ಟು ವಿರೋಧಕ್ಕೆ ವ್ಯಕ್ತವಾಗಿದೆ.