ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿದರ್ಶನ್ ಪುಟ್ಟಣ್ಣಯ್ಯರನ್ನು ಶತಾಯ ಗತಾಯ ಸೋಲಿಸಲೇಬೇಕು ಎನ್ನುವ ಉದ್ದೇಶ ಹೊಂದಿರುವ ಜೆಡಿಎಸ್, ಮಂಡ್ಯ ಜಿಲ್ಲೆಯಾದ್ಯಂತ ಅಬ್ಬರದ ಪ್ರಚಾರ ನಡೆಸಿದೆ.
ಸಮಾವೇಶದಲ್ಲಿ ಅಭ್ಯರ್ಥಿ ಪುಟ್ಟರಾಜು, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಬಿಎಸ್ಪಿ ರಾಜ್ಯಾಧ್ಯಕ್ಷ ಮಹೇಶ್, ಸಂಸದ ಕುಪೇಂದ್ರ ರೆಡ್ಡಿ, ಶಾಸಕ ಕೆ.ಟಿ.ಶ್ರೀಕಂಠೇಗೌಡ ಇತರರು ಭಾಗಿಯಾಗಿದ್ದಾರೆ.