ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ : ಪ್ರಧಾನಿ

ಶುಕ್ರವಾರ, 23 ಡಿಸೆಂಬರ್ 2022 (08:04 IST)
ನವದೆಹಲಿ : ಚೀನಾ, ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಅಬ್ಬರ ಹೆಚ್ಚಾಗಿದೆ. ಭಾರತಕ್ಕೂ ಈಗಾಗಲೇ ಒಮಿಕ್ರಾನ್ ಉಪತಳಿ ಬಿಎಫ್.7 ಲಗ್ಗೆಯಿಟ್ಟಿದೆ.

ಈ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಸಲಾಯಿತು.

ಸಭೆ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ, ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು.

ಜೊತೆಗೆ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯನ್ನು ಹೆಚ್ಚಳ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ. ಬಳಿಕ ಮಾಸ್ಕ್ ಧರಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಕೋವಿಡ್ ಉಪತಳಿಯ ಬಗ್ಗೆ ಕಣ್ಗಾವಲು ಇರಿಸುವ ಬಗ್ಗೆ ಪ್ರತಿಪಾದಿಸಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ