ಸರ್ಕಾರದಿಂದ ಮೀಸಲಾತಿ ಹೆಚ್ಚಳ

ಶನಿವಾರ, 26 ಮಾರ್ಚ್ 2022 (09:35 IST)
ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಸಂಬಂಧ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶೇ.7.5 ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂಬುದು ಎಸ್ಟಿ ಸಮುದಾಯವರ ಬೇಡಿಕೆಯಾಗಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್ಸಿ ಮತ್ತು ಎಸ್ಟಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು. 

ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ, ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದು ಹೇಳಿದರು.

ಇಂದಿನ ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ