ಕರ್ನಾಟಕದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳ!

ಮಂಗಳವಾರ, 28 ಡಿಸೆಂಬರ್ 2021 (17:45 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
 
ಮನೆ ಮನೆಗೆ ತೆರಳಿ ಆರೋಗ್ಯ ಸರ್ವೆ ಮಾಡುವಂತೆ ಆದೇಶ ನೀಡಲಾಗಿದೆ. ಆರೋಗ್ಯ ಸರ್ವೆ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ತೀವ್ರ ಉಸಿರಾಟ ಸಮಸ್ಯೆ ಇರುವ ಕೇಸ್ಗಳ ಸರ್ವೆಗೆ ಆದೇಶ ನೀಡಿದೆ.

ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ಸರ್ಕಾರ ಆದೇಶ ನೀಡಿದ್ದು ನಾಳೆಯಿಂದ ರಾಜ್ಯಾದ್ಯಂತ ILI, SARI ಕೇಸ್ಗಳ ಸಮೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ನಾಳೆಯಿಂದ 2022ರ ಜನವರಿ 15 ರವರೆಗೆ ಆರೋಗ್ಯ ಸರ್ವೆ ಕಾರ್ಯ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ನಡೆಸಿ ಪೋರ್ಟಲ್ನಲ್ಲಿ ವರದಿ ಹಾಕಲು ಸೂಚನೆ ಕೊಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ