ಭಾರತ-ಜಪಾನ್ ಜಂಟಿ ಸಮರಾಭ್ಯಾಸ

ಮಂಗಳವಾರ, 8 ಮಾರ್ಚ್ 2022 (12:51 IST)
ಬೆಳಗಾವಿ : ನಗರದ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಬೆಳಗಾವಿಯಲ್ಲಿ ಭಾರತ – ಜಪಾನ್ ಜಂಟಿ ಸಮರಾಭ್ಯಾಸ ಆರಂಭಿಸಿದ್ದು ಇಂದು ಭಾರತ-ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ಜರುಗಿತು.
ನಗರದ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ಯಲ್ಲಿ ಫೆಬ್ರವರಿ 27ರಿಂದ ನಡೆಯುತ್ತಿರುವ ಭಾರತ ಜಪಾನ್ ಜಂಟಿ ಸಮರಾಭ್ಯಾಸ ಮಾರ್ಚ್ 10ರವರೆಗೆ ನಡೆಯಲಿದೆ. ಇಂದಿನ ಮೂರು ದಿನಗಳ ಕಾಲ ಭಾರತ ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ಕೂಡ ನಡೆಯುತ್ತಿದೆ.

ವಾರ್ಷಿಕ ತರಬೇತಿ ಭಾಗವಾಗಿರುವ ‘ಧರ್ಮ ಗಾರ್ಡಿಯನ್ 2022’ ಕಾರ್ಯಕ್ರಮ ಇದ್ದಾಗಿದ್ದು 2018ರಿಂದಲೂ ಜಂಟಿ ಸಮರಾಭ್ಯಾಸ ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ.

ಭಾರತೀಯ ಸೇನೆಯ 15ನೇ ಬೆಟಾಲಿಯನ್ನ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಹಾಗೂ ಜಪಾನ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್ನ 30ನೇ ದಳದ ಯುದ್ಧ ಅನುಭವಿ ಪಡೆಗಳು ಸಮರಾಭ್ಯಾಸದಲ್ಲಿ ಭಾಗಿಯಾಗಿವೆ. ಸಮರಾಭ್ಯಾಸದಲ್ಲಿ ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯಲಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ