ನವದೆಹಲಿ : 2022ರ ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಬಗ್ಗು ಬಡಿದು ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಯುವಪಡೆಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅತ್ಯಂತ ಹೆಮ್ಮೆಯಿದೆ. ಐಸಿಸಿ ಅಂಡರ್- 19 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು.
ಅವರು ಈ ಪಂದ್ಯಾವಳಿಯಲ್ಲಿ ಉತ್ತಮ ಸ್ಥೈರ್ಯವನ್ನು ತೋರಿಸಿದ್ದಾರೆ. ಭಾರತದ ಕ್ರಿಕೆಟ್ ಭವಿಷ್ಯವು ಸುರಕ್ಷಿತವಾಗಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತದ ಕಿರಿಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದೆ. ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಅಂಡರ್-19 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ.
ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.
ಭಾರತ ಇಂಗ್ಲೆಂಡ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವ ಮೂಲಕ ಮತ್ತೊಮ್ಮೆ ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ನ್ನು ಮುಡಿಗೇರಿಸಿಕೊಂಡಿತು.