ದೇಶದ ಸ್ವಚ್ಛ ನಗರ ಕಿರೀಟ ಮುಡಿಗೇರಿಸಿಕೊಂಡ ಇಂದೋರ್

ಸೋಮವಾರ, 3 ಅಕ್ಟೋಬರ್ 2022 (10:45 IST)
ಮುಂಬೈ : ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಆರನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜಸ್ಥಾನದ ಸೂರತ್ ಮತ್ತು ಮಹಾರಾಷ್ಟ್ರದ ನವಿ ಮುಂಬೈ ನಂತರದ ಎರಡು ಸ್ಥಾನಗಳನ್ನು ಗಿಟ್ಟಿಸಿಕೊಂಡಿದೆ.

‘ಸ್ವಚ್ಛ ಸರ್ವೇಕ್ಷಣ್ ಅವಾರ್ಡ್ಸ್ 2022’ ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶವು ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಛತ್ತೀಸಗಢ ಮತ್ತು ಮಹಾರಾಷ್ಟ್ರವು ನಂತರದ ಸ್ಥಾನ ಗಿಟ್ಟಿಸಿಕೊಂಡಿದೆ.

ಇಂದೋರ್ ಮತ್ತು ಸೂರತ್ ಈ ವರ್ಷ ದೊಡ್ಡ ನಗರಗಳ ವಿಭಾಗದಲ್ಲಿ ತಮ್ಮ ಅಗ್ರ ಸ್ಥಾನಗಳನ್ನು ಉಳಿಸಿಕೊಂಡರೆ, ವಿಜಯವಾಡ ನವಿ ಮುಂಬೈ ತನ್ನ ಮೂರನೇ ಸ್ಥಾನವನ್ನು ಕಳೆದುಕೊಂಡಿದೆ.
100ಕ್ಕಿಂತ ಕಡಿಮೆ ನಗರ ಸ್ಥಳೀಯ ಸಂಸ್ಥೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ತ್ರಿಪುರಾ ಅಗ್ರಸ್ಥಾನವನ್ನು ಪಡೆದುಕೊಂಡಿದೆ ಎಂದು ಸಮೀಕ್ಷೆಯ ಫಲಿತಾಂಶಗಳಿಂದ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ