ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ!

ಶನಿವಾರ, 7 ಮೇ 2022 (09:48 IST)
ಲಕ್ನೋ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಮುಸ್ಲಿಂ ಮುಖಂಡ ಇರ್ಫಾನ್ ಆಜಾನ್ಗಾಗಿ ಧೋರನ್ಪುರ ಗ್ರಾಮದ ನೂರಿ ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಅನುಮತಿ ಕೋರಿದ್ದರು. 

ನ್ಯಾಯಮೂರ್ತಿ ವಿವೇಕ್ಕುಮಾರ್ ಬಿರ್ಲಾ ಹಾಗೂ ನ್ಯಾಯಮೂರ್ತಿ ವಿಕಾಸ್ ಅವರಿದ್ದ ನ್ಯಾಯಪೀಠವು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯ ವಿಚಾರವಾಗಿ ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಕೊಂಡಿದೆ. ಈಚೆಗಷ್ಟೇ ಉತ್ತರ ಪ್ರದೇಶದಲ್ಲೂ ಸಹ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಮಿತಗೊಳಿಸುವಂತೆ ಸೂಚನೆ ನೀಡಿತ್ತು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ