ಯುಗಾದಿಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಸೂಚನೆ

ಗುರುವಾರ, 24 ಮಾರ್ಚ್ 2022 (07:45 IST)
ಬೆಂಗಳೂರು : ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು,

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ.

ರಾಜ್ಯದಲ್ಲಿ ಅನೇಕ ಇಲಾಖೆಗಳು ತಮ್ಮ ಇಲಾಖೆಯ ಧ್ಯೇಯೋದ್ದೇಶಗಳನ್ನು ಹೊಂದುವ ಹೆಸರಿನಲ್ಲಿ ವರ್ಷದ ಒಂದು ದಿನದಲ್ಲಿ ಇಲಾಖೆಯ ದಿನಾಚರಣೆಯನ್ನು ಆಚರಿಸುತ್ತಿವೆ.

ಹಾಗೆಯೇ ಧಾರ್ಮಿಕ ದತ್ತಿ ಇಲಾಖೆಯೂ ಧಾರ್ಮಿಕ ಹಿನ್ನೆಲೆ ಮತ್ತು ಮನೋಭಾವ ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು `ಧಾರ್ಮಿಕ ದಿನ’ವೆಂಬ ಹೆಸರಿನಿಂದ ಆಚರಣೆ ಮಾಡುವುದು ಸೂಕ್ತ ಎಂದಿದ್ದಾರೆ. 

ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಕೆಲ ಭಾಗಗಳಲ್ಲಿ ಸೌರಮಾನ ಯುಗಾದಿಯಂದೇ ಆಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಿಂದಲೇ ಯುಗಾದಿಯ ದಿನದಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿಯೂ ಧಾರ್ಮಿಕ ದಿನ ಆಚರಣೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಧಾರ್ಮಿಕ ದಿನಾಚರಣೆಯ ವಿಶೇಷತೆಗಳೇನು?

1. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು `ಧಾರ್ಮಿಕ ದಿನ’ವನ್ನಾಗಿ ಆಚರಿಸುವುದು

2. ದೇವಾಲಯಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಕೈಗೊಳ್ಳುವುದು

3. ದೇವಾಲಯಗಳಲ್ಲಿ ಸಕ್ರೀಯವಾಗಿರುವ ಸ್ವಯಂ ಸೇವಕ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

5. ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಯಪಡಿಸುವ ರೀತಿಯಲ್ಲಿ ಕ್ರಿಯಾತ್ಮಕ ಆಚರಣೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ