ನವದೆಹಲಿ : ಪಂಚರಾಜ್ಯ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಹಲವು ಬದಲಾವಣೆಗೆ ಮುಂದಾಗಿದೆ.
ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜೀನಾಮೆ ನೀಡ್ತಾರೆ ಅಂತ ಸುದ್ದಿಯಾಗಿತ್ತು. ಆದರೆ ಇದನ್ನು ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ತಿರಸ್ಕರಿಸಿದರು.
ಇಂದಿನ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕು ಅನ್ನೋ ಒತ್ತಾಯ ಕೇಳಿಬಂದಿದೆ.
ಸೆಪ್ಟೆಂಬರ್ ಗೆ ನಡೆಯಲಿರುವ ಆಂತರಿಕ ಚುನಾವಣೆಗೂ ಮೊದಲೇ ರಾಹುಲ್ ಗಾಂಧಿ ಜವಬ್ದಾರಿ ವಹಿಸಿಕೊಳ್ಳಬೇಕು. ಪ್ರಧಾನಿ ಮೋದಿ ರಾಹುಲ್ ಗಾಂಧಿಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರತಿ ಭಾಷಣದಲ್ಲೂ ರಾಹುಲ್ ಟಾರ್ಗೆಟ್ ಆಗಿದ್ದಾರೆ ಅಂದ್ರೆ ರಾಹುಲ್ ಗಾಂಧಿ ಪ್ರಬಲ ಸ್ಪರ್ಧಿ ಎಂದು ಅವರಿಗೆ ತಿಳಿದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.