ಇಸ್ರೋ ನೂತನ ಅಧ್ಯಕ್ಷ ನೇಮಕ?

ಗುರುವಾರ, 13 ಜನವರಿ 2022 (06:56 IST)
ನವದೆಹಲಿ : ಇಸ್ರೋ  ನೂತನ ಅಧ್ಯಕ್ಷರಾಗಿ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ನೇಮಕವಾಗಿದ್ದಾರೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದೆ. ಆ ಸ್ಥಾನಕ್ಕೆ ಇದೀಗ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ.

ಇಸ್ರೋ ಅಧ್ಯಕ್ಷರಾಗಿರುವುದರ ಜೊತೆಗೆ, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್  ಹಳೆಯ ವಿದ್ಯಾರ್ಥಿ ಸೋಮನಾಥ್, 1985ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋಗೆ ಸೇರಿದರು ಮತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮತ್ತು ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಯೋಜನೆಗಳಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ. 

ಚಂದ್ರಯಾನ-2, GSAT-9  ಯೋಜನೆ ಸೇರಿದಂತೆ ಅನೇಕ ಯೋಜನೆಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಸೋಮನಾಥ್ ಅವರನ್ನು ರಾಕೆಟ್ ವಿಜ್ಞಾನಿ ಎಂದು ಕರೆಯಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ