ಆಸ್ಪತ್ರೆ ಆವರಣದಲ್ಲಿ ಗಿಡ, ಮರ ಬೆಳೆಸೋದು ಕಡ್ಡಾಯ : ಆರೋಗ್ಯ ಇಲಾಖೆ

ಭಾನುವಾರ, 30 ಜುಲೈ 2023 (09:09 IST)
ಬೆಂಗಳೂರು : ಇನ್ಮುಂದೆ ಪ್ರತಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರಗಳನ್ನ ಬೆಳೆಸಿ ನಿರ್ವಹಣೆ ಮಾಡುವುದನ್ನ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
 
ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಉತ್ತಮ ಗಾಳಿ ನೀಡುವಂತಹ ಹಾಗೂ ಔಷಧೀಯ ಗಿಡ/ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. 

ಹವಾಮಾನ ಬದಲಾವಣೆಯಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ತಪ್ಪಿಸಲು ಆರೋಗ್ಯ ಇಲಾಖೆ ಹೊಸ ಕ್ರಮ ತೆಗೆದುಕೊಂಡಿದೆ. ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ/ಮರಗಳನ್ನ ಕಡ್ಡಾಯವಾಗಿ ಬೆಳೆಸುವಂತೆ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ