ಜಯನಗರ ಫಲಿತಾಂಶ: ನಾಲ್ಕನೇ ಸುತ್ತಿನ ಮುಕ್ತಾಯಕ್ಕೆ ಬಿಜೆಪಿ, ಕಾಂಗ್ರೆಸ್ ಮತಗಳು
ಬುಧವಾರ, 13 ಜೂನ್ 2018 (09:37 IST)
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇದೀಗ ತಾನೇ ನಾಲ್ಕನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ.
ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಸಕ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಮುನ್ನಡೆ ಸಾಧಿಸಿದ್ದರು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ದ್ವಿತೀಯ ಸ್ಥಾನದಲ್ಲಿದ್ದಾರೆ.
ಸೌಮ್ಯ ರೆಡ್ಡಿಗೆ ನಾಲ್ಕನೇ ಸುತ್ತಿನ ಅಂತ್ಯಕ್ಕೆ 16,438 ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ 11,090 ಮತಗಳು ಬಂದಿವೆ. ಇತರರಿಗೆ 384 ಮತಗಳು ಬಂದಿವೆ. ಅಲ್ಲಿಗೆ ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.