ಇಂದಿನಿಂದ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ: ರೈತರ ಸಾಲಮನ್ನಾ ಖಚಿತ

ಸೋಮವಾರ, 2 ಜುಲೈ 2018 (08:58 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಇಂದಿನಿಂದ ಮೊದಲ ಬಾರಿಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಹೊಸ ಬಜೆಟ್ ಮಂಡಿಸಲಿದ್ದಾರೆ.

ಅಧಿವೇಶನಕ್ಕೆ ಮೊದಲು ರಾಜ್ಯಪಾಲ ವಜುಬಾಯಿ ವಾಲಾರಿಂದ ಭಾಷಣ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಮ್ಮಿಶ್ರ ಸರ್ಕಾರಕ್ಕಿರುವ ಮೊದಲ ಸವಾಲು ಎಂದರೆ ಬಜೆಟ್ ಮಂಡನೆ. ಆದರೆ ನಿನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳೂ ಒಗ್ಗೂಡಿ ಸದನ ಎದುರಿಸಲಿವೆ.

ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಬೆಳೆ ಸಾಲಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಇದಲ್ಲದೆ, ನೀರಾವರಿ ಯೋಜನೆಗೆ 1.25 ಕೋಟಿ ರೂ., ಐದು ವರ್ಷದಲ್ಲಿ 20 ಲಕ್ಷ ಮನೆಗಳ ನಿರ್ಮಾಣ, 1 ಕೋಟಿ ಉದ್ಯೋಗ ಸೃಷ್ಟಿ, ಕ್ರೀಡಾಳುಗಳ ಪ್ರೋತ್ಸಾಹಕ್ಕೆ ಕ್ರೀಡಾ ನೀತಿ ರೂಪಿಸಲು ಸಮನ್ವಯ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ