ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ

ಮಂಗಳವಾರ, 12 ಅಕ್ಟೋಬರ್ 2021 (07:18 IST)
ನವದೆಹಲಿ : ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಮೇಕೆದಾಟು  ಬಳಿ ಅಣೆಕಟ್ಟು ನಿರ್ಮಿಸುವ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡುವ ಬಗ್ಗೆ ಈ ಬಾರಿಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲೂ ಚರ್ಚೆ ಆಗಿಲ್ಲ.

ಸೋಮವಾರ ನಡೆದ ಸಭೆಯಲ್ಲಿ ಈ ತಿಂಗಳವರೆಗೆ ಬಾಕಿ ಉಳಿಸಿಕೊಂಡಿರುವ 25.84 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಸಭೆ ಆರಂಭ ಆಗುತ್ತಿದ್ದಂತೆ ತಮಿಳುನಾಡು ತಮಗೆ ಸುಪ್ರೀಂ ಕೋರ್ಟ್  ತೀರ್ಪಿನ ಪ್ರಕಾರ ಕರ್ನಾಟಕವು ಅಕ್ಟೋಬರ್ ತಿಂಗಳವರೆಗೆ 28.6 ಟಿಎಂಸಿ ನೀರನ್ನು ಬಿಡಬೇಕಾಗಿದೆ. ಬಾಕಿ ಉಳಿಸಿಕೊಂಡಿರುವ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡಿತು. ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಆಗಿರುವ ಮಳೆ, ಒಳ ಹರಿವು ಹಾಗೂ ಹೊರ ಹರಿವುಗಳೆಲ್ಲವನ್ನೂ ಪರಿಶೀಲಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ನವೀನ್ ಕುಮಾರ್ 25.84 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಪ್ರತಿನಿಧಿಗಳು ಮಳೆಗೆ ಅನುಗುಣವಾಗಿ ತಮಿಳುನಾಡಿಗೆ ನೀರು ಬಿಡುವುದಾಗಿ ತಿಳಿಸಿದರು ಎಂದು ಗೊತ್ತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ