ಕರ್ನಾಟಕದ ನೂತನ ಮುಖ್ಯಮಂತ್ರಿ ಮೇ 18 ರಂದು ಪ್ರಮಾಣ ವಚನ ಸ್ವೀಕಾರ?

ಬುಧವಾರ, 17 ಮೇ 2023 (08:08 IST)
ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಸಂಪುಟ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ಕಳುಹಿಸಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರೆಡು ದಿನದಲ್ಲಿ ರೂಪುಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದ ಜಯ ಸಾಧಿಸಿದ ಬಳಿಕ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಿಎಂಗಾದಿ ರೇಸ್ನಲ್ಲಿದ್ದಾರೆ. ಇಂದು ಸಿಎಲ್ಪಿ ಸಭೆ ನಡೆಯಲಿದೆ. ಸಭೆ ಕುರಿತು ದೆಹಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಇಂದು ಸಿಎಲ್ಪಿ ಸಭೆ ನಡೆಯಲಿದೆ. ವರದಿಯನ್ನು ಹೈಕಮಾಂಡ್ಗೆ ಹಸ್ತಾಂತರಿಸಲಿದ್ದು, ನಂತರ ಸಿಎಂ ಹೆಸರನ್ನು ಘೋಷಿಸಲು ಹೈಕಮಾಂಡ್ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ