ಕೇದಾರನಾಥ ಯಾತ್ರೆ ಸ್ಥಗಿತ!

ಭಾನುವಾರ, 10 ಜುಲೈ 2022 (10:37 IST)
ಡೆಹ್ರಾಡೂನ್ : ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಅಮರನಾಥದಲ್ಲಿ ನಡೆದ ಘಟನೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಅಮರನಾಥದಲ್ಲಿ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ. ಇದುವರೆಗೆ 16 ಜನರು ಮೃತಪಟ್ಟಿದ್ದಾರೆ. 

ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸೃಷ್ಟಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ