ಕೇರಳದಲ್ಲಿ ಪ್ರವಾಹ ಪರಿಸ್ಥಿತಿ: ಇಂದು ಕೇಂದ್ರ ಗೃಹ ಸಚಿವರ ಭೇಟಿ
60 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ. ನದಿ, ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಮೃತರ ಸಂಖ್ಯೆ 37 ಕ್ಕೇರಿದೆ.
ನಿನ್ನೆ ಸಿಎಂ ಪಿಣರಾಯಿ ವಿಜಯನ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕೂಡಾ ನೆರೆಯ ಕೇರಳಕ್ಕೆ ಸಹಾಯ ಹಸ್ತ ಚಾಚಿದ್ದು, 10 ಕೋಟಿ ರೂ. ಮತ್ತು ವೈದ್ಯರ ತಂಡವನ್ನು ಕಳುಹಿಸಿಕೊಟ್ಟಿದೆ. ಇಂದೂ ಕೂಡಾ ಭಾರೀ ಮಳೆ ಮುಂದುವರಿದಿದೆ.