ವಿರೋಧದ ನಡುವೆಯೂ ಹಂಗಾಮಿ ಸ್ಪೀಕರ್ ಆಗಿ ನೇಮಕವಾದ ಕೆಜಿ ಬೋಪಯ್ಯ
ಶುಕ್ರವಾರ, 18 ಮೇ 2018 (18:04 IST)
ಬೆಂಗಳೂರು: ನಾಳಿನ ವಿಶ್ವಾಸ ಮತ ಪ್ರಕ್ರಿಯೆಗೆ ರಾಜ್ಯ ರಾಜಕೀಯ ಸಜ್ಜುಗೊಂಡಿದೆ. ವಿಶ್ವಾಸ ಮತ ಪ್ರಕ್ರಿಯೆ ನಡೆಸಲು ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಲಾಗಿದೆ.
ಇಂದು ಮಧ್ಯಾಹ್ನ ರಾಜ್ಯಪಾಲರ ವಜುಬಾಯಿ ವಾಲಾ, ಬೋಪಯ್ಯ ಅವರಿಗೆ ಪ್ರತಿಜ್ಞಾ ವಿಧಿ ನೆರವೇರಿಸಿದ್ದಾರೆ. ಆದರೆ ತರಾತುರಿಯಲ್ಲಿ ಬೋಪಯ್ಯ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.
ಅದೇನೇ ಇದ್ದರೂ ನಾಳಿನ ವಿಶ್ವಾಸ ಮತ ಪ್ರಕ್ರಿಯೆ ನಡೆಸಿಕೊಡುವ ಅಧಿಕಾರ ಮಾತ್ರ ಬೋಪಯ್ಯ ಅವರಿಗಿರುತ್ತದೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಬೆಳಿಗ್ಗೆ 11 ಗಂಟೆಗೆ ಎಲ್ಲಾ ಶಾಸಕರು ಪ್ರತಿಜ್ಞಾ ವಿಧಿ ನೆರವೇರಿಸಲಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.