ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವ

ಮಂಗಳವಾರ, 30 ಆಗಸ್ಟ್ 2022 (11:50 IST)
ಬೆಂಗಳೂರು  : ಪ್ರತಿ ಲೀಟರ್ಗೆ ಹಾಲಿನ ದರ 3 ರೂಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಪ್ರಸ್ತಾವ ಸಲ್ಲಿಸಿದೆ.
 
15 ಹಾಲು ಒಕ್ಕೂಟಗಳು ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿವೆ. ಕಳೆದ ಮೂರು ವರ್ಷಗಳ ಹಿಂದೆ ಸರ್ಕಾರ ಹಾಲಿನ ದರ ಪ್ರತಿ ಲೀಟರ್ಗೆ 2 ರೂ. ಏರಿಕೆ ಮಾಡಿತ್ತು.

ಬಳಿಕ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಲೇ ಇಲ್ಲ. ಹಲವು ಬಾರಿ ಸರ್ಕಾರಕ್ಕೆ ದರ ಏರಿಕೆ ಪ್ರಸ್ತಾವ ಸಲ್ಲಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಆದರೆ ಈ ಬಾರಿ ದರ ಏರಿಕೆ ಮಾಡಲೇಬೇಕು ಎಂದು ಕೆಎಂಎಫ್ ಒತ್ತಾಯಿಸಿದೆ.

ಈಗ ಲೀಟರ್ಗೆ 37 ರೂಪಾಯಿ ನೀಡುತ್ತಿದ್ದಾರೆ. 3 ರೂಪಾಯಿ ದರ ಏರಿಕೆ ಮಾಡಿದರೆ, 40 ರೂಪಾಯಿ ಏರಿಕೆ ಆಗಲಿದೆ. ಬೇರೆ ರಾಜ್ಯಗಳಲ್ಲಿ ಹೆಚ್ಷಿನ ಬೆಲೆಗೆ ಹಾಲು ಮಾರಾಟ ಮಾಡುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಕೆಎಂಎಫ್ನಿಂದ ಕಡಿಮೆ ಬೆಲೆಗೆ ಹಾಲು ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ದರ ಏರಿಕೆ ಪ್ರಸ್ತಾವವನ್ನು ಸರ್ಕಾರದ ಮುಂದಿಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ