ಕೇರಳ, ಕೊಡಗು ಪ್ರವಾಹ ಸಂತ್ರಸ್ತರ ನೆರವಿಗೆ ಬಂದ ಕೊಲ್ಲೂರು ಮೂಕಾಂಬಿಕೆ!
ನಿನ್ನೆ ನಡೆದ ಮೂಕಾಂಬಿಕಾ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಪ್ರವಾಹ ಪೀಡಿತ ಕೇರಳಕ್ಕೆ 1 ಕೋಟಿ ರೂ. ಮತ್ತು ಕೊಡಗು ಜಿಲ್ಲೆಗೆ ದೇವಾಲಯದ ವತಿಯಿಂದ 25 ಲಕ್ಷ ರೂ.ಗಳ ಧನ ಸಹಾಯ ಮಾಡಲಾಗುತ್ತದೆ.
ಈ ಪರಿಹಾರ ಧನವನ್ನು ಎರಡೂ ರಾಜ್ಯಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಆಡಳಿತ ಮಂಡಳಿ ನೀಡಲಿದೆ. ಅಷ್ಟೇ ಅಲ್ಲದೆ, ಪ್ರವಾಹ ಸಂತ್ರಸ್ತರಿಗಾಗಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆಯನ್ನೂ ನೆರವೇರಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ.