ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್!

ಶುಕ್ರವಾರ, 28 ಜನವರಿ 2022 (19:09 IST)
ನವದೆಹಲಿ : ಕೋವ್ಯಾಕ್ಸಿನ್ ಲಸಿಕೆಯ ತಯಾರಕ ಕಂಪನಿ ಭಾರತ್ ಬಯೋಟೆಕ್ ಮೂಗಿನ ಮೂಲಕ ನೀಡಲಾಗುವ ಬೂಸ್ಟರ್ ಡೋಸ್ನ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಒಪ್ಪಿಗೆ ನೀಡಿದೆ.

ಕೋವ್ಯಾಕ್ಸಿನ್ನ ಎರಡು ಡೋಸ್ ಪಡೆದವರು ಮೂರನೇ ಲಸಿಕೆಯಾಗಿ ಇಂಟ್ರಾನಾಸಲ್(ಮೂಗಿನ ಮೂಲಕ ನೀಡಲಾಗುವ ಲಸಿಕೆ) ಬೂಸ್ಟರ್ ಡೋಸ್ ಪಡೆಯಬಹುದು ಎಂದು ಕಂಪನಿ ತಿಳಿಸಿದೆ.

ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಮೂರನೇ ಹಂತದ ವ್ಯಾಕ್ಸಿನ್ಗೆ ಚಾಲನೆ ನೀಡಿದ್ದು, ದೇಶದ 9 ಸ್ಥಳಗಳಲ್ಲಿ ಇದರ ಪ್ರಯೋಗ ನಡೆಯುತ್ತಿದೆ. 

ಇಂಟ್ರಾನಾಸಲ್ ಲಸಿಕೆ ಚುಚ್ಚು ಮದ್ದು ನೀಡುವ ವಿಧಾನಕ್ಕಿಂತಲೂ ಸುಲಭವಾದುದು. ಈ ವಿಧಾನದ ಲಸಿಕೆಗೆ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚಿನ ತರಬೇತಿಯ ಅಗತ್ಯ ಇಲ್ಲ ಎಂದು ಕಂಪನಿ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ