ಕೋಲ್ಕತ್ತಾ : ಕೋವಿಡ್ 3ನೇ ಅಲೆ, ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.
ಈ ಬಗ್ಗೆ ಸಭೆಯಲ್ಲಿ ಮಾತನಾಡಿದ ಅವರು, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅಗತ್ಯವಿದ್ದರೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ಮತ್ತು ಸರ್ಕಾರಿ ಕಚೇರಿಗಳು ಶೇ.50ರಷ್ಟು ಹಾಜರಾತಿಯೊಂದಿಗೆ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕೋವಿಡ್-19 ಪ್ರಕರಣಗಳು ಹೆಚ್ಚುವುದರ ಜೊತೆಗೆ ಓಮಿಕ್ರಾನ್ ಸೋಂಕುಗಳು ಕಾಣಿಸಿಕೊಳ್ಳುತ್ತಿವೆ. ಆದ್ದರಿಂದ, ಪರಿಸ್ಥಿತಿಯ ಪರಿಶೀಲನೆಯ ಅಗತ್ಯವಿದೆ. ಸಂಖ್ಯೆಗಳು ಹೆಚ್ಚುತ್ತಲೇ ಇದ್ದರೆ, ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಬೇಕು ಎಂದರು.