ಪ್ರತಿ ಸೋಂಕಿತನಿಂದ ಇಬ್ಬರಿಗೆ ಹಬ್ಬುತ್ತಿದೆ ಕೋವಿಡ್!

ಭಾನುವಾರ, 24 ಏಪ್ರಿಲ್ 2022 (09:40 IST)
ನವದೆಹಲಿ : ದೆಹಲಿಯಲ್ಲಿ ಸತತ ಎರಡನೇ ವಾರವೂ ಆರ್- ವ್ಯಾಲ್ಯೂ (ಒಬ್ಬರಿಂದ ಎಷ್ಟುಜನರಿಗೆ ಕೋವಿಡ್ ಸೋಂಕು ಹರಡುತ್ತಿದೆ ಎಂಬುದನ್ನು ತಿಳಿಸಲು ಇರುವ ಮಾನದಂಡ) 2ಕ್ಕಿಂತ ಹೆಚ್ಚು ದಾಖಲಾಗಿದೆ.

ಐಐಟಿ ಮದ್ರಾಸ್ನ ತಜ್ಞರ ತಂಡ ಹೇಳಿದೆ. ಸದ್ಯ ದೇಶದಲ್ಲೇ ಅತಿ ಹೆಚ್ಚು ಕೇಸು ದಾಖಲಾಗುತ್ತಿರುವ ದೆಹಲಿಯಲ್ಲಿ ಕಳೆದ ವಾರ 2.12ರಷ್ಟುಆರ್- ವ್ಯಾಲ್ಯೂ ದಾಖಲಾಗಿತ್ತು.

ಇದೀಗ ಏ.18-23 ವಾರದಲ್ಲೂ ಆರ್ ವ್ಯಾಲ್ಯೂ 2.1ರಷ್ಟಿದೆ. ಅಂದರೆ ಒಬ್ಬ ಸೋಂಕಿತನಿಂದ 2.1 ಜನರಿಗೆ ಸೋಂಕು ಹಬ್ಬುತ್ತಿದೆ ಎಂದು ತಜ್ಞರ ತಂಡ ಹೇಳಿದೆ.

ಆರ್ ವ್ಯಾಲ್ಯೂ 1ಕ್ಕಿಂತ ಕಡಿಮೆ ಇದ್ದರೆ ಸಾಂಕ್ರಾಮಿಕ ಮುಕ್ತಾಯದ ಹಂತದ ಸಾಗುತ್ತಿದೆ ಎಂದು ಪರಿಗಣಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ಕಳೆದ 3 ತಿಂಗಳಲ್ಲೇ ಮೊದಲ ಬಾರಿಗೆ, ಕಳೆದ ವಾರ ಆರ್ ವ್ಯಾಲ್ಯೂ ಶೇ.1ರ ಗಡಿ ದಾಟುವ ಮೂಲಕ ಆತಂಕ ಹುಟ್ಟುಹಾಕಿತ್ತು.

ಇದೀಗ ಸತತ 2ನೇ ವಾರ ಕೂಡಾ ಹರಡುವಿಕೆ ಪ್ರಮಾಣ ಹೆಚ್ಚು ಕಡಿಮೆ ಅದೇ ಮಟ್ಟದಲ್ಲಿ ಇರುವ ಕಾರಣ, ಮುಂದಿನ ವಾರಗಳಲ್ಲಿ ಸೋಂಕಿತರ ಪ್ರಮಾಣ ಮತ್ತಷ್ಟುಹೆಚ್ಚುವ ಆತಂಕ ಎದುರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ