ಮಂಡ್ಯ : ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ.
ಈ ಸುದ್ದಿ ಈ ಭಾಗದ ರೈತರಿಗೆ ಸಂತಸ ತಂದಿದ್ರೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟಿಗೆ 30,216 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದರಿಂದ ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ.
124.80 ಅಡಿಗಳಷ್ಟು ಇರುವ ಕೆಆರ್ಎಸ್ ಡ್ಯಾಂ ಸದ್ಯ 123.20 ಅಡಿಗಳಷ್ಟು ಭರ್ತಿಯಾಗಿದೆ. ಡ್ಯಾಂ ಭರ್ತಿಗೆ ಇನ್ನೂ ಕ್ಷಣಗಣನೆ ಇರುವ ಕಾರಣ ಡ್ಯಾಂನಿಂದ ನದಿಗೆ 106 ಅಡಿ ಮಟ್ಟದ 15 ಗೇಟ್ಗಳ ಮೂಲಕ 25,000 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. 49.452 ಟಿಎಂಸಿ ಸಾಂದ್ರತೆ ಇರುವ ಕೆಆರ್ಎಸ್ ಡ್ಯಾಂನಲ್ಲಿ 47.800 ಟಿಎಂಸಿ ನೀರು ಇದೆ.
ಇದೀಗ ಈ ಬಾರಿಯೂ ಹೆಚ್ಚಿನ ಪ್ರಮಾಣದಲ್ಲಿ ಕೆಆರ್ಎಸ್ ಡ್ಯಾಂನಿಂದ ನೀರು ಹರಿಬಿಟ್ಟರೆ ಮತ್ತೆ ಅದೇ ರೀತಿಯ ವಾತಾವರಣ ನಿರ್ಮಾಣವಾಗುತ್ತದೆ. ಅಲ್ಲದೇ ಕಾವೇರಿ ಕೊಳ್ಳದ ಜನರಿಗೂ ಸಹ ಪ್ರವಾಹದ ಭೀತಿ ಎದುರಾಗಿದ್ದು, ಈಗಾಗಲೇ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆಯನ್ನು ಸಹ ನೀಡಿದೆ.