ಐದೇ ನಿಮಿಷದಲ್ಲಿ ಭಾರತಕ್ಕೆ ಹೊಸ ಪ್ರಧಾನಿ ಆಯ್ಕೆ ಮಾಡುವ ಫಾರ್ಮುಲಾ ಹೇಳಿದ ಲಾಲೂ ಪ್ರಸಾದ್ ಯಾದವ್!

ಶುಕ್ರವಾರ, 31 ಆಗಸ್ಟ್ 2018 (09:08 IST)
ನವದೆಹಲಿ: ಭ್ರಷ್ಟಾಚಾರ ಆರೋಪ ಹೊತ್ತು ಜೈಲು ಸೇರಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಗೆದ್ದರೆ ಪ್ರಧಾನಿ ಯಾರಾಗಬೇಕೆಂಬ ತಲೆನೋವಿಗೆ ಪರಿಹಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುವುದು ಎಲ್ಲಾ ಮಿತ್ರ ಪಕ್ಷಗಳಿಗೆ ಇಷ್ಟವಿಲ್ಲ. ಇದೇ ಕಾರಣಕ್ಕೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅತೀ ಹೆಚ್ಚು ಸ್ಥಾನ ಪಡೆದ ಪಕ್ಷದ ನಾಯಕರು ಪ್ರಧಾನಿಯಾಗಲಿ ಎಂದಿದ್ದರು.

ಆದರೆ ಸದ್ಯ ಅನಾರೋಗ್ಯ ಕಾರಣದಿಂದ ಆಸ್ಪತ್ರೆಯಲ್ಲಿರುವ ಲಾಲೂ ಯಾದವ್ ಇನ್ನೊಂದು ಸೂತ್ರ ಕಂಡುಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿದ ಬಳಿಕ ಎಲ್ಲಾ ಸಮಾನ ಮನಸ್ಕ ಪಕ್ಷಗಳು ಸಭೆ ನಡೆಸಲಿ. ಸಭೆಯಲ್ಲಿ ಐದೇ ನಿಮಿಷದಲ್ಲಿ ಪ್ರಧಾನಿ ಯಾರಾಗಬೇಕೆಂದು ನಿರ್ಧರಿಸಲಿ. ಅವರನ್ನೇ ಪ್ರಧಾನಿ ಮಾಡಲಿ ಎಂದು ಲಾಲೂ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ