ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ ‘ಕೈ’ ನಾಯಕರು

ಶುಕ್ರವಾರ, 19 ಮೇ 2023 (07:05 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸಿಎಲ್ಪಿ ಸಭೆ ನಡೆಸಿದ ಬಳಿಕ ರಾಜಭವನಕ್ಕೆ ‘ಕೈ’ ನಾಯಕರು ತೆರಳಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು.

ಇವರಿಗೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು. 

ಕರ್ನಾಟಕ ಸಿಎಂ ಗಾದಿಗಾಗಿ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಎಷ್ಟು ಮನವೊಲಿಸಿದರೂ ಬಗ್ಗಿರಲಿಲ್ಲ. ಕೆಲ ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ