ಪಶ್ಚಿಮ ಬಂಗಾಳದಲ್ಲಿ ಸಿಡಿಲಿಗೆ 14 ಮಂದಿ ಬಲಿ!

ಶುಕ್ರವಾರ, 28 ಏಪ್ರಿಲ್ 2023 (06:46 IST)
ಕೊಲ್ಕತ್ತಾ : ಸಿಡಿಲು ಬಡಿದು 14 ಜನ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ಗುರುವಾರ ನಡೆದಿದೆ.
 
ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದಾರೆ. ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು, ಮುರ್ಷಿದಾಬಾದ್ ಹಾಗೂ ಉತ್ತರ 24 ಪರಗಣದಲ್ಲಿ ತಲಾ ಇಬ್ಬರು, ಪಶ್ಚಿಮ ಮಿಡ್ನಾಪುರ ಹಾಗೂ ಹೌರಾದಲ್ಲಿ ತಲಾ ಮೂರು ಜನ ಸಾವಿಗೀಡಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಮೃತಪಟ್ಟವರು ಹೆಚ್ಚಿನ ಜನ ರೈತರಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ